ನಾಳೆಯೇ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಹಾಸನ ಟಿಕೆಟ್ ಕೂಡ ಫೈನಲ್-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ. ಬೆಂಗಳೂರು,ಏಪ್ರಿಲ್,6,2023(..):ನಾಳೆಯೇ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಇಂದು ಪಿರಿಯಾಪಟ್ಟಣದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ. ಯಾತ್ರೆ ಮುಗಿಸಿ ಸಂಜೆ ಬೆಂಗಳೂರಿಗೆ ಹಿಂದಿರುಗಲಿದ್ದೇನೆ. ಬಳಿಕ ಅಭ್ಯರ್ಥಿಗಳ ಟಿಕೆಟ್ ಫೈನಲ್ ಮಾಡುತ್ತೇನೆ ಎಂದರು. ಹಾಸನ ಅಭ್ಯರ್ಥಿಯೂ ನಾಳೆಯೇ ಅಂತಿಮವಾಗಲಿದೆ. ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ನಾಳೆಯೇ ಎಲ್ಲಾ ಫೈನಲ್ ಆಗಲಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. : 2nd - - - - –- - .