ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ: ಸುಳ್ಳುಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ- ಅರುಣ್ ಸಿಂಗ್. ಬೆಂಗಳೂರು,ಏಪ್ರಿಲ್,4,2023(..):ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹಬ್ಬಿಸಲಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅರುಣ್ ಸಿಂಗ್, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹಬ್ಬಿಸಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರದಾಡುತ್ತಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಧು ಅರುಣ್ ಸಿಂಗ್ ತಿಳಿಸಿದ್ದಾರೆ. : - - - - – - – .