ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿದ್ದ ಮೂರ್ನಾಲ್ಕು ನಾಯಕರಿಂದ ಸ್ವಾಮೀಜಿಗಳಿಗೆ ಧಮ್ಕಿ-ಶಾಸಕ ಅರವಿಂದ ಬೆಲ್ಲದ್ ಆರೋಪ. ಬೆಂಗಳೂರು,ಏಪ್ರಿಲ್,3,2023(..):ಪಂಚಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ನಾಲ್ಕೈದು ನಾಯಕರು ಜಯಮೃತ್ಯುಂಜಯ ಸ್ವಾಮೀಜಿಗೆ ಕುಡಿದು ಕರೆ ಮಾಡಿ ಧಮ್ಕಿ ಹಾಕುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ್​ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಸಿಎಂ ಬೊಮ್ಮಾಯಿ ನಿರ್ಧಾರದಿಂದ ಕಾಂಗ್ರೆಸ್ ನಾಯಕರಿಗೆ ಗರ ಬಡಿದಿದೆ. ಸ್ವಾಮೀಜಿಗಳಿಗೆ ಕರೆ ಮಾಡಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ . ಹೋರಾಟದಲ್ಲಿದ್ದ ಮೂರ್ನಾಲ್ಕು ನಾಯಕರು ಹಿಂಸೆ ಕೊಡುತ್ತಿದ್ದಾರೆ. ಮೀಸಲಾತಿ ಒಪ್ಪಿಕೊಂಡಿದ್ದಕ್ಕೆ ಕೆಲ ಕೈ ನಾಯಕರು ಮದ್ಯ ಸೇವಿಸಿ ಫೋನ್ ಮಾಡಿದ್ದಾರೆ ಎಂದು ಆರೋಪಿಸಿದರು. ಬಸವ ಜಯಮೃತ್ಯುಂಜಯ ಸ್ವಾಮೀಜಿ ಈ ಕುರಿತಾಗಿ ನೋವನ್ನು ತೋಡಿಕೊಂಡಿದ್ದಾರೆ. ಯಾರು ಧಮ್ಕಿ ಹಾಕುತ್ತಿದ್ದಾರೆಂದು ನಮ್ಮ ಇಡೀ ಸಮುದಾಯಕ್ಕೆ ಗೊತ್ತಿದೆ. ಮತ್ತೆ ಧಮ್ಕಿ ಹಾಕಿದರೆ ಏನು ಮಾಡಬೇಕು ಅನ್ನೋದು ನಮಗೆ ಗೊತ್ತಿದೆ. ಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿಲ್ಲ. ಇದು ಕಾಂಗ್ರೆಸ್​ನವರು ಮಾಡುತ್ತಿರುವ ಅಪಪ್ರಚಾರ ಎಂದು ಕಿಡಿಕಾರಿದರು. ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಕಾಶಪ್ಪನವರ್​ ವಿರುದ್ಧ ಪರೋಕ್ಷವಾಗಿ ಈ ಆರೋಪ ಮಾಡಿದ್ದಾರೆ ಎನ್ನಲಾಗಿದೆ. : - –--- .