ಜೆಡಿಎಸ್ ತೊರೆದು ಬಿಜೆಪಿ ಸೇರಿದ ಮಾಜಿ ಶಾಸಕ ಎ.ಟಿ ರಾಮಸ್ವಾಮಿ. ನವದೆಹಲಿ,ಏಪ್ರಿಲ್,1,2023(..):ನಿನ್ನೆಯಷ್ಟೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎ.ಟಿ ರಾಮಸ್ವಾಮಿ ಇಂದು ಜೆಡಿಎಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಎ.ಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆಯಾದರು. ಬಳಿಕ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆಯಾಗುತ್ತಿರುವುದು ಖುಷಿ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೆಲಸ ಮಾಡುತ್ತೇನೆ ಎಂದರು. ಅರಕಲಗೂಡು ಕ್ಷೇತ್ರದಿಂದ ಎಟಿ ರಾಮಸ್ವಾಮಿ ಅವರು 2 ಬಾರಿ ಕಾಂಗ್ರೆಸ್ 2 ಬಾರಿ ಜೆಡಿಎಸ್ ನಿಂದ ಶಾಸಕರಾಗಿದ್ದರು. : - - - – - .