ಚುನವಣಾ ಕರ್ತವ್ಯಕ್ಕೆ ಗೈರು ಹಾಜರು ಹಿನ್ನೆಲೆ: ಇಬ್ಬರು ಶಿಕ್ಷಕರು ಸಸ್ಪೆಂಡ್. ವಿಜಯಪುರ, ಏಪ್ರಿಲ್,1,2023(..):ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆ ಇಬ್ಬರು ಶಿಕ್ಷಕರನ್ನ ಅಮಾನತುಗೊಳಿಸಿ ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯ ಮಹಂತೇಶ್ ಆದೇಶ ಹೊರಡಿಸಿದ್ದಾರೆ. ಬರಟಗಿ ಸರ್ಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ, ಅಪ್ಪಣ್ಣ ಸವದಿ, ಕಳ್ಳಕವಟಗಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಅಲ್ಲಾಭಕ್ಷ ಅಮಾನತಾದ ಶಿಕ್ಷಕರು. ಚೆಕ್ ಪೋಸ್ಟ್ ನಲ್ಲಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾದ ಹಿನ್ನೆಲೆ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಮೇಲೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಇಬ್ಬರು ಶಿಕ್ಷಕರನ್ನ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯ ಮಹಂತೇಶ್ ಅಮಾನತು ಮಾಡಿ ಆದೇಶಿಸಿದ್ದಾರೆ. : – - - – .