ಮಂಗಳೂರಿನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ. ಮಂಗಳೂರು,ಮಾರ್ಚ್,31,2023(..):ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೆ.ಎಸ್ ರಾವ್ ರೋಡ್ ಬಳಿಯ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ. ಮೈಸೂರು ಮೂಲದ ದೇವೇಂದ್ರಪ್ಪ, ಪತ್ನಿ ನಿರ್ಮಲಾ, ಮಕ್ಕಳಾದ ಚೈತ್ರ, ಚೈತನ್ಯ ಆತ್ಮಹತ್ಯೆಗೆ ಶರಣಾದವರು. ದೇವೇಂದ್ರಪ್ಪ ಮೈಸೂರಿನ ವಾಣಿವಿಲಾಸ ಬಡಾವಣೆಯ ನಿವಾಸಿಯಾಗಿದ್ದು ಪತ್ನಿ ಮಕ್ಕಳ ಜೊತೆ ಮಂಗಳೂರಿಗೆ ತೆರಳಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಈ ನಡುವೆ ಹೆಂಡತಿ ಮತ್ತು ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ಬರೆದಿಟ್ಟಿದ್ದು , ಸಾಲಗಾರರ ಒತ್ತಡ ತಡೆಯಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. : – – - - – .