ಅಥಣಿ ಬಿಜೆಪಿ ಟಿಕೆಟ್ ಫೈಟ್: ವರಿಷ್ಠರ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು- ಶಾಸಕ ಬಾಲಚಂದ್ರ ಜಾರಕಿಹೊಳಿ. ಬೆಳಗಾವಿ,ಮಾರ್ಚ್,31,2023(..): ರಾಜ್ಯ ವಿಧಾನಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು ಈ ಮಧ್ಯೆ ಬೆಳಗಾವಿ ಜಿಲ್ಲೆ ಅಥಣಿ ಬಿಜೆಪಿ ಟಿಕೆಟ್ ಗೆ ಫೈಟ್ ಶುರುವಾಗಿದೆ. ಹಾಲಿ ಬಿಜೆಪಿ ಶಾಸಕ ಮಹೇಶ್‌ ಕುಮಟಳ್ಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ನಡುವೆ ಬಿಜೆಪಿ ಗಾಗಿ ಪೈಪೋಟಿ ಉಂಟಾಗಿದೆ. ತನ್ನ ಆಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ದಕ್ಕಿಸಿಕೊಡಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಾಲಚಂದ್ರ ಜಾರಕಿಹೊಳಿ, ವರಿಷ್ಠರ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಣ್ ಸವದಿ ಜತೆ ಪಕ್ಷದ ವರಿಷ್ಠರು ಚರ್ಚಿಸಿರಬೇಕು. ಟಿಕೆಟ್ ಘೋಷಣೆಯಾದ ಬಳಿಕ ಗೆಲುವಿಗೆ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. : - –- - - .