ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಎಸ್.ಆರ್ ಶ್ರೀನಿವಾಸ್. ಬೆಂಗಳೂರು,ಮಾರ್ಚ್,30,2023(..):ತುಮಕೂರು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ‍್ಧರಾಮಯ್ಯ ಸಮ್ಮುಖದಲ್ಲಿ ಎಸ್.ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಎಸ್.ಆರ್ ಶ್ರೀನಿವಾಸ್, ನನ್ನನ್ನು ಕತ್ತು ಹಿಡಿದು ಪಕ್ಷದಿಂದ ಹೊರಹಾಕಿದರು. ಸ್ವಾಭಿಮಾನಕ್ಕೆ ಧಕ್ಕೆ ಬಂತು ಅಂತಾ ಜೆಡಿಎಸ್ ತೊರೆದೆ ಎಂದರು. ನಾನು ಮೂಲತಃ ಕಾಂಗ್ರೆಸ್ ಸದಸ್ಯನೇ. ಕಾಂಗ್ರೆಸ್ ಪಕ್ಷದಿಂದ ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ನಮ್ಮ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. 2002ರಲ್ಲಿ ನಾನು ಜೆಡಿಎಸ್ ಸೇರಿದ್ದೆ 2004ರಲ್ಲಿ ಟಿಕೆಟ್ ಕೊಡಲಿಲ್ಲ. ಆಗ ಗುಬ್ಬಿಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ನನಗೆ ನಾಟಕ ಗಿಮಿಕ್ ಮಾಡಲು ಬರಲ್ಲ ಎಂದು ಜೆಡಿಎಸ್ ನಾಯಕರಿಗೆ ಟಾಂಗ್ ನೀಡಿದರು. : – - -.