ಪಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ಮತ್ತೆ ವಿಸ್ತರಣೆ. ಬೆಂಗಳೂರು,ಮಾರ್ಚ್,28,2023(..):ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಅವಧಿಯನ್ನ ಮತ್ತೆ ವಿಸ್ತರಣೆ ಮಾಡಲಾಗಿದೆ. ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ದಿನವಾಗಿತ್ತು. ಇದೀಗ ಕೇಂದ್ರ ಸರ್ಕಾರ ಪ್ಯಾನ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡುವ ಗಡುವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿತ್ತು, ಈ ಹಿಂದೆ ಮಾರ್ಚ್​ 31 ಕೊನೆಯ ದಿನಾಂಕವೆಂದು ಹೇಳಲಾಗಿತ್ತು. ಆದರೆ ಇದೀಗ ಜೂನ್ 30ರವರೆಗೂ ಗಡುವು ವಿಸ್ತರಿಸಲಾಗಿದೆ. ಆಧಾರ್, ಪಾನ್ ಕಾರ್ಡ್ ಲಿಂಕ್ ಮಾಡಿಸಲು ಸೈಬರ್​ ಸೆಂಟರ್​ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಫೈನ್ ಕಟ್ಟುವ ಭೀತಿಯಲ್ಲಿ ಕ್ಯೂನಲ್ಲಿ ನಿಂತು ಲಿಂಕ್​​ ಮಾಡಿಸುತ್ತಿದ್ದಾರೆ, : – - - -- .