‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತು ಬೆಂಗಳೂರು, ಮಾರ್ಚ್ 26, 2023 (..):ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೂರನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಪ್ರಧಾನಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವಾದ ‘ಮನ್ ಕಿ ಬಾತ್’ ನ 99 ನೇ ಆವೃತ್ತಿ ಇಂದು ಪ್ರಸಾರವಾಗಲಿದೆ. ಅಕ್ಟೋಬರ್ 3, 2014 ರಂದು ವಿಜಯದಶಮಿ ಸಂದರ್ಭದಲ್ಲಿ ಪ್ರಾರಂಭವಾದ ಕಾರ್ಯಕ್ರಮವು ತನ್ನ 98 ಆವೃತ್ತಿಗಳನ್ನು ಪೂರ್ಣಗೊಳಿಸಿದೆ. ಅಂದಹಾಗೆ ‘ಮನ್ ಕಿ ಬಾತ್’ ಮಾಸಿಕ ಭಾಷಣವಾಗಿದ್ದು, ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಲ್ ಇಂಡಿಯಾ ರೇಡಿಯೊದಲ್ಲಿ ಪ್ರಸಾರವಾಗುತ್ತದೆ. ಈ ಕಾರ್ಯಕ್ರಮವು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಮತ್ತು ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರವಾಗಲಿದೆ.