ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ ಎಲ್ಲೇ ನಿಂತರೂ ಗೆಲ್ಲುತ್ತಾರೆ- ಮಾಜಿ ಸಚಿವ ಕೆ.ಜೆ ಜಾರ್ಜ್. ಬೆಂಗಳೂರು,ಮಾರ್ಚ್,21,2023(..):ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಜೆ ಜಾರ್ಜ್, ಸಿದ್ದರಾಮಯ್ಯ ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುತ್ತೇನೆ ಎಂದಾಗ ನಾನು ಇದ್ದೆ. ಸಿದ್ಧರಾಮಯ್ಯ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ಅವರು ಮಾಸ್ ಲೀಡರ್. ಎಲ್ಲೇ ನಿಂತರೂ ಗೆಲ್ಲುತ್ತಾರೆ ಎಂದು ತಿಳಿಸಿದರು. : - - – -- - .