ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್…? ನವದೆಹಲಿ,ಮಾರ್ಚ್,17,2023(..):ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಇಂದು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡಿದ್ದಾರೆ. ಈ ನಡುವೆ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ದ ಸ್ಪರ್ಧೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೆಲ ನಾಯಕರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ ಒಪ್ಪಿಗೆ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. : –-- - -