ಸ್ಪರ್ಧೆ ಬಗ್ಗೆ ಏನೇ ನಿರ್ಧಾರ ತೆಗದುಕೊಂಡರೂ ನಾನು ಬದ‍್ಧ- ಶಾಸಕ ಯತೀಂದ್ರ ಸಿದ್ದರಾಮಯ್ಯ. ಮೈಸೂರು,ಮಾರ್ಚ್,18,2023(..): ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಮಧ್ಯೆ ಕೋಲಾರದಿಂದ ಸ್ಪರ್ಧಿಸದೆ ವರುಣಾದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಹೈಕಮಾಂಡ್ ಏನು ಹೇಳಿದೆಯೋ ಗೊತ್ತಿಲ್ಲ. ಈ ಬಗ್ಗೆ ತಂದೆಯವರ ಬಳಿ ಕೇಳಿ ಮಾತನಾಡುತ್ತೇನೆ. ಹೈಕಮಾಂಡ್ ಸ್ಪರ್ಧೆ ಬಗ್ಗೆ ಏನೇ ನಿರ್ಧಾರ ತೆಗೆದುಕೊಂಡರೂ ನಾನು ಬದ್ಧ ಎಂದಿದ್ದಾರೆ. : – - – - .