ಚಲಿಸುತ್ತಿದ್ದ ಕಾರು ಹಳ್ಳಕ್ಕೆ ಬಿದ್ದು ದಂಪತಿ ದುರ್ಮರಣ. ಕೋಲಾರ,ಮಾರ್ಚ್,17,2023(..):ಚಲಿಸುತ್ತಿದ್ದ ಕಾರು ಹಳ್ಳಕ್ಕೆ ಬಿದ್ದು ದಂಪತಿ ದುರ್ಮರಣಕ್ಕೀಡಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ನಡೆದಿದೆ. ಶ್ರೀನಿವಾಸಪುರದ ಲಕ್ಷ್ಮೀಪುರ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಆಂಧ್ರ ಮೂಲದ ಶಫಿ(55), ಶಮಾ(50) ಮೃತಪಟ್ಟವರು. ಕೆಂಪೇಗೌಡ ಏರ್ ಪೋರ್ಟ್ ನಿಂದ ಮದನಪಲ್ಲಿಗೆ ತೆರಳುತ್ತಿದ್ದ ಕಾರು ಲಕ್ಷ್ಮೀಪುರ ಕ್ರಾಸ್ ಬಳಿ 20ರಿಂದ 25 ಅಡಿ ಹಳ್ಳಕ್ಕೆ ಬಿದ್ದಿದೆ. ಏರ್ ಪೋರ್ಟ್ ನಲ್ಲಿ ಮಗಳನ್ನ ಬಿಟ್ಟು ವಾಪಸ್ ಬರುವಾಗ ಈ ಘಟನೆ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ಗೌನಿಪಲ್ಲಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ಶ್ರೀನಿವಾಸಪುರ ಆಸ್ಪತ್ರೆಗೆ ರವಾನಿಸಲಾಗಿದೆ. : -- – – - .