ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ಹೈವೇ ಲೋಕಾರ್ಪಣೆಗೆ ಕ್ಷಣಗಣನೆ ಮೈಸೂರುಮಾರ್ಚ್ 12, 2023 (..): ಬೆಂಗಳೂರು-ಮೈಸೂರು ಹೆದ್ದಾರಿ ಉದ್ಪಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮೈಸೂರಿನಿಂದ ಮಂಡ್ಯದ ಪಿಇಎಸ್ ಕಾಲೇಜು ಹೆಲಿಪ್ಯಾಡ್‌ಗೆ ಆಗಮಿಸಿ 11.25 ಕ್ಕೆ ಪ್ರವಾಸಿಮಂದಿರ ವೃತ್ತದಿಂದ ನಂದ ಸರ್ಕಲ್ ರವರೆಗೆ ರೋಡ್ ಶೋ ನಡೆಸಲಿದ್ದಾರೆ. ನಂತರ11.40 ಕ್ಕೆ ಮೈಸೂರು-ಬೆಂಗಳೂರು ದಶಪಥ ರಸ್ತೆಯನ್ನು ಹನಕೆರೆಯ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಜತೆಗೆ ರೂ.4128.92 ಕೋಟಿ ವೆಚ್ಚದ ಒಟ್ಟು 92.33 ಕಿ.ಮೀ ಉದ್ದದ 4 ಪಥದ ಮೈಸೂರು – ಕುಶಾಲನಗರ 4 ಪ್ಯಾಕೇಜ್‌ಗಳ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.