5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ರದ್ದು ಪ್ರಶ್ನಿಸಿ ಸರ್ಕಾರದಿಂದ ಮೇಲ್ಮನವಿ. ಬೆಂಗಳೂರು,ಮಾರ್ಚ್,11,2023(..):ರಾಜ್ಯದಲ್ಲಿ 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ. ಇಂದು ತುರ್ತು ವಿಚಾರಣೆ ನಡೆಸುತ್ತಿರುವ ವಿಭಾಗೀಯ ಪೀಠ ಈ ಕುರಿತು ಸಂಜೆಯೊಳಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದತ್ತು. ಈ ಹಿನ್ನೆಲೆಯಲ್ಲಿ ಬೋರ್ಡ್ ಎಕ್ಸಂಗೆ ಹೈಕೋರ್ಟ್‌ ಏಕಸದಸ್ಯ ಪೀಠ ತಡೆ ನೀಡಿತ್ತು. : – – – 5 8- -