ಲೋಕಾಯುಕ್ತ ವಿಚಾರಣೆಗೆ ಹಾಜರಾದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ. ಬೆಂಗಳೂರು,ಮಾರ್ಚ್,9,2023(..):ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ವಕೀಲರೊಂದಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆಗೆ ಹಾಜರಾಗಿದ್ದು, ಕೆಎಸ್ ಡಿಎಲ್ , ಟೆಂಡರಿಂಗ್ ಬಗ್ಗೆ ಲೊಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. ಡಿವೈಎಸ್ ಪಿ ಅಂಥೋನಿ ಜಾನ್ ರಿಂದ ವಿಚಾರಣೆ ನಡೆಯಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೈಕೋರ್ಟ್ ನಿಂದ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. : - - –- .