ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಖಂಡನೆ: ಹಿಂಪಡೆಯುವಂತೆ ಆಗ್ರಹ. ಉಡುಪಿ,ಮಾರ್ಚ್,9,2023(..):ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲೀಂ ರಾಜರು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈ ವಿರುದ್ದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಪ್ರಮೋದ್ ಮುತಾಲಿಕ್, ಸಾವಿರಾರು ವರ್ಷದಿಂದ ಮಠಧಲ್ಲಿ ಪೂಜೆ ನಡೆಯುತ್ತಿದೆ. ಮುಸ್ಲೀಂ ವೋಟ್ ಬ್ಯಾಂಕ್ ಗಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಕೀರ್ತಿ ಗಳಿಸಲು ಇಂತಹ ಅಸಹ್ಯ ಹೇಳಿಕೆ ನೀಡಿದ್ದಾರೆ. ಚುನಾವಣೆ ಹೊತ್ತಲ್ಲಿ ಇಂತಹ ಹೇಳಿಕೆ ಬೇಕಿತ್ತಾ…? ಎಂದು ಪ್ರಶ್ನಿಸಿದರು. ಮಿಥುನ್ ರೈ ತಮ್ಮ ಹೇಳಿಕೆಯನ್ನ ಹಿಂಪಡೆಯಬೇಕು. ಇಲ್ಲದಿದ್ದರೇ ಹಿಂದೂಗಳು ಮತ ಹಾಕಲ್ಲ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು. : - –- - -