ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿದ್ದ ಬಂದ್ ರದ್ದು. ಬೆಂಗಳೂರು,ಮಾರ್ಚ್,9,2023(..):ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ನಾಳೆಗೆ ಕರೆ ಕೊಟ್ಟಿದ್ದ ಬಂದ್ ಅನ್ನು ರದ್ದುಗೊಳಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು. ಆದರೆ ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗುವ ಹಿನ್ನೆಲೆ ಬಂದ್ ಅನ್ನು ಕಾಂಗ್ರೆಸ್ ನಾಯಕರು ಹಿಂಪಡೆದಿದ್ದಾರೆ. : - - – – .