ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ ಬೆಂಗಳೂರು,ಮಾರ್ಚ್,7,2023(..):ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ನಾಪತ್ತೆಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ರೂ. ಬಾಂಡ್ ಇಬ್ಬರು ಶ್ಯೂರಿಟಿ ನೀಡುವಂತೆ ಸೂಚನೆ ನೀಡಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಲೋಕಾಯುಕ್ತ ಪೊಲೀಸರು ದಾಖಲೆ ಸಲ್ಲಿಸುವವರೆಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಅಲ್ಲದೇ 48ಗಂಟೆಯೊಳಗೆ ಶರಣಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. : -- – -