ಚ‍ನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿ ಎಂದ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು, ಆಗಸ್ಟ್,15,2024 (..):ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ಟೌನ್ ನಲ್ಲಿರುವ ವೀರಭದ್ರ ದೇವಾಲಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿ ಎಂದಿದ್ದಾರೆ. ಗ್ಯಾರಂಟಿ ಯೋಜನೆ ಪರಿಷ್ಕರಣೆ ಕುರಿತು ಚರ್ಚೆ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಯಾವ ಸಚಿವರು ಏನೂ ಮಾತನಾಡಲ್ಲ. ಏನೂ ಇಲ್ಲ. ಯಾವುದೇ ಬದಲಾವಣೆಯಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತದೆ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಸಂಸದರಾಗಿದ್ದು ಈಗ ಕೇಂದ್ರಮಂತ್ರಿಯೂ ಆಗಿದ್ದಾರೆ. ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯಲಿದೆ. : , ,, -