ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಮಾಜಿ ಸಿಎಂ ಬಿಎಸ್ ವೈ ಆಗ್ರಹ. ಕಲ್ಬುರ್ಗಿ,ಮಾರ್ಚ್,6,2023(..):ಪ್ರಶಾಂತ್ ಮಾಡಾಳ್ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಆಗ್ರಹಿಸಿದ್ದಾರೆ. ಇಂದು ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ, ಇಂದು ಅಥವಾ ನಾಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನವಾಗುವ ನಿರೀಕ್ಷೆ ಇದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಾಡುವವರನ್ನ ಯಾರನ್ನೂ ರಕ್ಷಿಸಲ್ಲ. ಕೇಸ್ ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ. ಭ್ರಷ್ಟಾಚಾರ ಯಾರೇ ಮಾಡಿದ್ರೂ ಅವರಿಗೆ ತಕ್ಕ ಶಿಕ್ಷೆ ಕೊಡಲಾಗುತ್ತದೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. : - - - – - .