ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬೆಂಗಳೂರು,ಮಾರ್ಚ್,6,2023(..):ಲೋಕಾಯುಕ್ತ ದಾಳಿಯಲ್ಲಿ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರಿಂದ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್​ಗೆ ಮಾಡಾಳ್ ವಿರೂಪಾಕ್ಷಪ್ಪ ಪರ ವಕೀಲರು ಮನವಿ ಮಾಡಿದ್ದಾರೆ. ಇನ್ನು ಹೈಕೋರ್ಟ್​ ನ್ಯಾಯಮೂರ್ತಿ ಕೆ.ನಟರಾಜನ್ ಅವರು ನಾಳೆಗೆ ವಿಚಾರಣೆ ನಿಗದಿಪಡಿಸಿದ್ದು ಬೇಲ್ ಸಿಗುತ್ತಾ ಕಾದು ನೋಡಬೇಕಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ 8 ಕೋಟಿ ರೂ. ಹಣ ಪತ್ತೆಯಾಗಿತ್ತು. : - - – –