ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯ. ಮುಂಬೈ,ಮಾರ್ಚ್,6,2023(..):ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹೈದರಾಬಾದ್ ನಲ್ಲಿ ಸಿನಿಮಾವೊಂದರ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾಗ ಈ ಘಟನೆ ನಡೆದಿದೆ. ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಅಮಿತಾಬ್ ಬಚ್ಚನ್ ಪಕ್ಕೆಲುಬಿಗೆ ಗಾಯಗಳಾಗಿದೆ ಎನ್ನಲಾಗುತ್ತಿದೆ. ಸದ್ಯ ಬಿಗ್ ಬಿ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : - - - - – .