ನಮ್ಮ ಕಾರ್ಯಕ್ರಮಗಳಿಗೆ ನಿರೀಕ್ಷೆಗೂ ಮೀರಿ ಜನ ಭಾಗಿ: ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ-ಮಾಜಿ ಸಿಎಂ ಬಿಎಸ್ ವೈ. ಬೆಳಗಾವಿ,ಮಾರ್ಚ್,4,2023(..):ಬಿಜೆಪಿ ಕಾರ್ಯಕ್ರಮಗಳಿಗೆ ಜನರು ನಿರೀಕ್ಷೆಗೂ ಮೀರಿ ಸೇರುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನ ಬಂದಿದ್ದರು. ಬಿಜೆಪಿ ಕಾರ್ಯಕ್ರಮಗಳಿಗೆ ನಿರೀಕ್ಷೆಗೂ ಮೀರಿ ಜನ ಸೇರುತ್ತಿದ್ದಾರೆ. ಇವೆಲ್ಲವೂ ಮುಂಬರುವ ಚುನಾವಣೆಗೆ ಅನುಕೂಲವಾಗಲಿದೆ ಎಂದರು. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಸಮಗ್ರ ತನಿಖೆ ಮಾಡಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವುದಾಗಿ ಜೊತೆಗೆ ಈ ಪ್ರಕರಣದಲ್ಲಿ ಯಾರೇ ಇದ್ದರೂ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಹೇಳಿದ್ದಾರೆ. ಕಾನೂನಿನ ಪ್ರಕಾರ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಸಿದ್ದರಾಮಯ್ಯ ಕಾಂಗ್ರೆಸ್ ನಾನು ತೀರ್ಮಾನ ಮಾಡಲು ಆಗಲ್ಲ. ಹೀಗಾಗಿ ಈ ವಿಚಾರವಾಗಿ ನಾನು ಹೆಚ್ಚು ಮಾತಾಡಲ್ಲ ಎಂದರು. : – – - -- – –- -.