ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿ: ಮತ್ತೆ 15 ದಿನಗಳ ಕಾಲಾವಕಾಶ ನೀಡಿದ ಸರ್ಕಾರ. ಬೆಂಗಳೂರು,ಮಾರ್ಚ್.3,2023(..):ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿಯನ್ನ ರಾಜ್ಯ ಸರ್ಕಾರ ಮತ್ತೆ 15 ದಿನಗಳಿಗೆ ವಿಸ್ತರಿಸಿ ಆದೇಶಿಸಿದೆ. ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ. 50ರ ರಿಯಾಯಿತಿ ನೀಡಿದ್ದ ಸರ್ಕಾರ ಇದೀಗ ಮತ್ತೆ ಶೇ.50 ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ಫೈನ್ ಕಟ್ಟಲು 15 ದಿನಗಳವರೆಗೆ ಕಾಲಾವಕಾಶ ನೀಡಿದೆ. 11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಹಿಂದೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ನೀಡಿದ್ದ ವೇಳೆ ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕೋಟ್ಯಂತರ ರೂಪಾಯಿ ದಂಡ ಸಂಗ್ರಹವಾಗಿತ್ತು. ಆನ್​​ಲೈನ್​, ಆಫ್​​ಲೈನ್ ಮೂಲಕ ಸವಾರರು ದಂಡ ಪಾವತಿಸಿದ್ದರು. : 50% - – - - - -15