ನಾಳೆ ಸರ್ಕಾರಿ ನೌಕರರ ಪ್ರತಿಭಟನೆ ಹಿನ್ನೆಲೆ: ತುರ್ತು ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಫೆಬ್ರವರಿ,28,2023(..):7ನೇ ವೇತನ ಆಯೋಗ ಮತ್ತು ಒಪಿಎಸ್ ಜಾರಿಗೆ ಆಗ್ರಹಿಸಿ ನಾಳೆ ಸರ್ಕಾರಿ ನೌಕರರು ಮುಷ್ಕರ ಹೂಡಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಹಳೆ ಪಿಂಚಣಿ ಯೋಜನೆ ಮತ್ತು 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಪಟ್ಟು ಹಿಡಿದಿದ್ದು, ಇಂದು ರಾಜ್ಯಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ನಡೆಸಿದ ಸಂಧಾನ ಸಭೆ ವಿಫಲವಾಯಿತು. ಹೀಗಾಗಿ ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ನೌಕರ ಸಂಘ ಹೇಳಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾತ್ರಿ 9.30ಕ್ಕೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. : -- –- - - .