ರೂಪ ಮುದ್ಗಲ್ ವಿರುದ್ಧ ದಾಖಲು. ಬೆಂಗಳೂರು, ಫೆ.28, 2023 (..) ಐಪಿಎಸ್ ಅಧಿಕಾರಿ ಡಿ. ರೂಪಾ ಮುದ್ಗಲ್ ವಿರುದ್ಧ , ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಇಂದು ಹಾಜರಾಗಿದ್ದ ರೋಹಿಣಿ ಸಿಂಧೂರಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದರು. ಈ ವೇಳೆ, ತಡೆಯಾಜ್ಞೆ ಇದ್ದರೂ, ರೂಪಾ ಮುದ್ಗಲ್ , ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಆಮೂಲಕ ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದರು. ರೋಹಿಣಿ ಹೇಳಿಕೆ ಆಧರಿಸಿ, ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಕೋರ್ಟ್ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿತು. : ------