ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಹಾಡಿ ಹೊಗಳಿದ ರಾಜ್ಯಪಾಲರು ಬೆಂಗಳೂರು,ಆಗಸ್ಟ್,15,2024 (..):ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ಲಾಘಿಸಿದ್ದಾರೆ. 78ನೇ ಸ್ವಾಂತಂತ್ರ್ಯೋತ್ಸವದ ತಮ್ಮ ಸಂದೇಶದಲ್ಲಿ ರಾಜ್ಯ ಸರ್ಕಾರವನ್ನು ಹಾಡಿಹೊಗಳಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬದವರಿಗೆ ಅನುಕೂಲವಾಗಿವೆ. ಆರ್ಥಿಕ ಸಬಲೀಕರಣಕ್ಕೆ, ನಿರುದ್ಯೋಗಿ ಯುವಕರಿಗೆ ಸಹಾಯವಾಗಿದೆ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ. ಅಭಿವೃದ್ಧಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಭಿನ್ನ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದು ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಕಾರಣ ಎಂದು ಗುಣಗಾನ ಮಾಡಿದ್ದಾರೆ. ಕರ್ನಾಟಕ ಹಲವು ಅಭಿವೃದ್ಧಿಗೆ ಸಾಕ್ಷಿಯಾಗಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೂ ಕೊಡುಗೆ ನೀಡಿದೆ. ರಾಜ್ಯದ ಗ್ಯಾರಂಟಿ ಯೋಜನೆಗಳು ಇತರ ರಾಜ್ಯಗಳಿಗೂ ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ. : , ,