ಇಂದು ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ: ಇದು ನನ್ನ ಜೀವನದಲ್ಲಿ ಮರೆಯಲಾಗದ ಶುಭದಿನ ಎಂದ ಬಿಎಸ್ ವೈ. ಶಿವಮೊಗ್ಗ,ಫೆಬ್ರವರಿ,27,2023(..):ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಇಂದೇ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಏರ್ ಪೋರ್ಟ್ ಲೋಕಾರ್ಪಣೆ ಮಾಡಲಿದ್ದು ಈ ಹಿನ್ನೆಲೆಯಲ್ಲಿ ಇದು ನನ್ನ ಜೀವನದಲ್ಲಿ ಮರೆಯಲಾಗದ ಶುಭದಿನ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೊಂದು ವಿಶೇಷ ಸಂದರ್ಭ ನನಗೆ. ನನ್ನ ಹುಟ್ಟು ಹಬ್ಬದ ಸಂದರ್ಭದಲ್ಲೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ ಲೋಕಾರ್ಪಣೆಗೊಳಿಸುವುದು ವಿಶೇಷವಾದ ಘಳಿಗೆಯಾಗಿದೆ. ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. : – –- - - .