ಮಾ.9 ರಿಂದ ದ್ವಿತೀಯ ಪಿಯು ಪರೀಕ್ಷೆ: 1109 ಪರೀಕ್ಷಾ ಕೇಂದ್ರಗಳು ಇರಲಿವೆ- ಶಿಕ್ಷಣ ಸಚಿವ ಬಿ.ಸಿ ನಾಗೇಶ್. ಬೆಂಗಳೂರು,ಫೆಬ್ರವರಿ,21,2023(..):ಮಾರ್ಚ್ 9 ರಿಂದ ಮಾರ್ಚ್ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಒಟ್ಟು 7,27,387 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇದೇ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ತಿಳಿಸಿದರು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5716 ಕಾಲೇಜುಗಳು ಪಾಲ್ಗೊಳ್ಳಲಿದ್ದು, ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1109 ಒಟ್ಟು ಪರೀಕ್ಷಾ ಕೇಂದ್ರಗಳು ಇರಲಿದೆ ಎಂದು ಬಿಸಿ ನಾಗೇಶ್ ಮಾಹಿತಿ ನೀಡಿದರು. ಪಿಯು ಪರೀಕ್ಷೆಯ ವೇಳಾಪಟ್ಟಿ ಹೀಗಿದೆ. 9-3-2023: ಕನ್ನಡ, ಅರೇಬಿಕ್ 11-3-2023: ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ 13-3-2023: ಅರ್ಥಶಾಸ್ತ್ರ 14-3-2023: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ 15-3-2023: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ 16-03-2023: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ 17-3-2023: ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್ 18-3-2023: ಭೂಗೋಶಶಾಸ್ತ್ರ, ಜೀವಶಾಸ್ತ್ರ 20-3-2023: ಇತಿಹಾಸ, ಭೌತಶಾಸ್ತ್ರ 21-3-2023: ಹಿಂದಿ 23-3-2023: – ಇಂಗ್ಲೀಷ್ 25-3-2023: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ 27-3-2023: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ 29-03-2023: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ : - 9- 1109 – - - .