ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿ ಆ.28ರವರೆಗೆ ವಿಸ್ತರಣೆ ಬೆಂಗಳೂರು, ಆಗಸ್ಟ್ 14,2024 (..):ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ , ನಟ ದರ್ಶನ್‌ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರ ತನಕ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ನಟ ದರ್ಶನ್ , ಇತರೆ ಆರೋಪಿಗಳು ಹಾಗೂ ತುಮಕೂರು ಜೈಲಿನಿಂದ ನಾಲ್ವರು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. ಇದೀಗ ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿಯನ್ನ ಆಗಸ್ಟ್ 28ರವರೆಗೆ ವಿಸ್ತರಿಸಿ ನ್ಯಾಯಮೂರ್ತಿ ವಿಶ್ವನಾಥ್ ಸಿ ಗೌಡರ್ ಆದೇಶಿಸಿದ್ದಾರೆ. : , , , 28