ಬಿಜೆಪಿಯಿಂದ ದ್ವೇಷದ ರಾಜಕಾರಣ: ಸಮಾಜವನ್ನ ಸಾಮರಸ್ಯ ಹಾಳು ಮಾಡುತ್ತಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ. ಬೆಂಗಳೂರು,ಫೆಬ್ರವರಿ,20,2023(..):ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಗ್ಯುದ್ಧ ಶುರುವಾಗಿದೆ. ಈ ಮಧ್ಯೆ ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ಮುಗಿಬಿದ್ದಿದ್ದಾರೆ. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಮಾಜವನ್ನ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಇವರೆಲ್ಲಾ ರಾಜಕೀಯ ಮಾಡುವುದಕ್ಕೆ ನಾಲಾಯಕ್ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ‍್ಧರಾಮಯ್ಯ, ನಳೀನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷನಾಗಲು ಲಾಯಕ್ಕಿಲ್ಲ. ಅಭಿವೃದ್ದಿ ಚರ್ಚೆ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಅಂತಾರೆ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಸಮಾಜವನ್ನ ಸಾಮರಸ್ಯವನ್ನ ಹಾಳು ಮಾಡುತ್ತಿದ್ದಾರೆ ಬಿಜೆಪಿಯವರಂತೆ ನಾವು ಒಳಗೊಂದು ಹೊರಗಿಂದು ಮಾಡಲ್ಲ. ಬೇರೆ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದರು. : – - – - -