ಬಾಕಿ ತೆರಿಗೆ ಪಾವತಿಸದ ಹಿನ್ನೆಲೆ: ಬಿಬಿಎಂಪಿಯಿಂದ ಮಂತ್ರಿಮಾಲ್ ವಸ್ತುಗಳು ಜಪ್ತಿ. ಬೆಂಗಳೂರು,ಫೆಬ್ರವರಿ,18,2023(..):ಭಾರೀ ಮೊತ್ತದ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ನಗರದ ಮಂತ್ರಿ ಸ್ಕ್ವೇರ್ ಮಾಲ್​ ಅನ್ನುಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಮಾರ್ಷಲ್​​ಗಳು, ಪೊಲೀಸ್ ಅಧಿಕಾರಿಗಳ ಜತೆ ಮಂತ್ರಿ ಮಾಲ್ ಗೆ ಆಗಮಿಸಿ . ಮಾಲ್​​ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಕಳೆದ 5 ವರ್ಷಗಳಿಂದ ತೆರಿಗೆ ಪಾವತಿಸದೆ ಮಂತ್ರಿಮಾಲ್ ಕಳ್ಳಾಟವಾಡಿದ್ದು ಕಳ್ಳಾಟಕ್ಕೆ ಬ್ರೇಕ್ ಹಾಕಲು ಮುಂದಾದ ಬಿಬಿಎಂಪಿ ಇಂದು ಮಂತ್ರಿಮಾಲ್ ನ ವಸ್ತುಗಳನ್ನ ಮುಟ್ಟುಗೋಲು ಹಾಕಿಕೊಂಡಿದೆ. ಮಂತ್ರಿ ಮಾಲ್ ಸುಮಾರು 32 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ. 2020ರ ಆಗಸ್ಟ್​​​ನಲ್ಲಿ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಲಾಗಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರೂ ಮಾಲ್ ಆಡಳಿತವು ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. : -- –- - – .