ಕ್ರಿಕೆಟ್ ಟೂರ್ನಿಮೆಂಟ್ ವೇಳೆ ಕಿರಿಕ್: ಚಾಕುವಿನಿಂದ ಇರಿದು ಇಬ್ಬರ ಬರ್ಬರ ಹತ್ಯೆ. ದೊಡ್ಡಬಳ್ಳಾಪುರ,ಫೆಬ್ರವರಿ,17,2023(..):ಕ್ರಿಕೆಟ್ ಟೂರ್ನಿಮೆಂಟ್ ವೇಳೆ ಗಲಾಟೆ ನಡೆದು ದುಷ್ಮರ್ಮಿಗಳು ಇಬ್ಬರನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಡೆದಿದೆ. ಭರತ್, ಪ್ರತೀಕ್ ಕೊಲೆಯಾದ ಯುವಕರು. ಶಿವರಾತ್ರಿ ಹಬ್ಬದ ಪ್ರಯುಕ್ತ ಬಿಜೆಪಿ ಮುಖಂಡ ಧೀರಜ್​ ಅವರು ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದ್ದರು. ಈ ವೇಳೆ ಮೈದಾನದಲ್ಲಿ ಕಾರು ನಿಲ್ಲಿಸಿದ್ದನ್ನು ಭರತ್ ಹಾಗೂ ಪ್ರತೀಕ್ ಪ್ರಶ್ನಿಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಗ್ರಾಮಸ್ಥರು, ಇತರೆ ಆಟಗಾರರು ಜಗಳ ಬಿಡಿಸಿ ಕಳುಹಿಸಿದ್ದರು. ಆದರೆ ಭರತ್, ಪ್ರತೀಕ್ ಬಸ್​ ಸ್ಟ್ಯಾಂಡ್​ಗೆ ಬಂದ ಸಮಯದಲ್ಲಿ ದುಷ್ಕರ್ಮಿಗಳು ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ ನಡೆಸಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –---