ಬಿಬಿಸಿ ಕಚೇರಿ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ, ಪರಿಶೀಲನೆ. ನವದೆಹಲಿ,ಫೆಬ್ರವರಿ,14,2023(..):ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ () ದೆಹಲಿ ಮತ್ತು ಮುಂಬೈ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಬಿಸಿ ಕಚೇರಿಯಲ್ಲಿ ಐಟಿ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದು ಸಿಬ್ಬಂದಿಯ ಮೊಬೈಲ್​ ವಶಕ್ಕೆ ಪಡೆದಿದ್ದಾರೆ. ಪ್ರಮುಖರನ್ನ ಬಿಟ್ಟು ಉಳಿದ ನೌಕರರು ಕಚೇರಿ ಬಿಟ್ಟು ಬೇಗ ಮನೆಗೆ ತೆರಳುವಂತೆ ಸೂಚಿಸಿದ್ದಾರೆ. ಸುಮಾರು 20 ತೆರಿಗೆ ಅಧಿಕಾರಿಗಳು ಬಿಬಿಸಿಯ ದೆಹಲಿ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮುಂಬೈನಲ್ಲಿ ಬಿಬಿಸಿ ಸ್ಟುಡಿಯೊದಲ್ಲಿ ಶೋಧ ನಡೆದಿದೆ. ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಬಿಸಿ ಒಳಗೊಂಡಿರುವ ಅಂತರರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪದ ಮೇಲೆ ತೆರಿಗೆ ಇಲಾಖೆ ತಪಾಸಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. : - –-