ಗ್ಯಾರಂಟಿ ಯೋಜನೆ ಸ್ಥಗಿತ ಮಾಡಿ ಎಂದು ನಾನು ಹೇಳಿಲ್ಲ- ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು,ಆಗಸ್ಟ್,14,2024 (..):ಗ್ಯಾರಂಟಿ ಯೋಜನೆ ಸ್ಥಗಿತ ಮಾಡಿ ಎಂದು ನಾನು ಹೇಳಿಲ್ಲ. ಗ್ಯಾರಂಟಿ ಪರಿಷ್ಕರಣೆ ಮಾಡಿ ಎಂದು ಸಲಹೆ ನೀಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ವಿರೋಧ ಪಕ್ಷದವರ ರೀತಿ ನಾನು ಗ್ಯಾರಂಟಿ ನಿಲ್ಲಿಸಿ ಎಂದು ಹೇಳಿಲ್ಲ. ಜನರ ಅಭಿಪ್ರಾಯವನ್ನ ಹೈಕಮಾಂಡ್ ಗೆ ತಿಳಿಸಿದ್ದೇನೆ. ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಿದರೆ 10 ಸಾವಿರ ಕೋಟಿ ರೂ. ಉಳಿಯುತ್ತೆ ಎಂದರು. ಶಾಸಕರಿಗೆ ಅನುದಾನದ ಕೊರತೆ ಆಗುತ್ತದೆ. ಆರ್ಥಿಕವಾಗಿ ಸಬಲರಾಗಿರುವವರನ್ನ ಕೈಬಿಡಿ ಇದು ಸಾರ್ವಜನಿಕರ ಅಭಿಪ್ರಾಯ. ಅರ್ಹರಿಗೆ ಸರ್ಕಾರಿ ಗ್ಯಾರಂಟಿ ಯೋಜನೆ ತಲುಪಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. : , , , ,