ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಸ್ಪಷ್ಟನೆ ನೀಡಿದ ಎಂಎಲ್ ಸಿ ಬಾಬುರಾವ್ ಚಿಂಚನಸೂರ್. ಕಲ್ಬರ್ಗಿ,ಫೆಬ್ರವರಿ,14,2023(..):ವಿಧಾನಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಬಿಜೆಪಿ ತೊರೆದು ಮತ್ತೆ ತನ್ನ ಮೂಲ ಕಾಂಗ್ರೆಸ್ ಪಕ್ಷಕ್ಕೆ ಹೋಗಲಿದ್ದಾರೆ ಎಂಬ ಸುದ್ದಿ ಹರಡಿದ ಹಿನ್ನೆಲೆ ಈ ಬಗ್ಗೆ ಸ್ವತಃ ಬಾಬುರಾವ್ ಚಿಂಚನಸೂರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನಾನು ಬಿಜೆಪಿ ಪಕ್ಷದಲ್ಲೇ ಇರುತ್ತೇನೆ. ಕಾಂಗ್ರೆಸ್ ಗೆ ಹೋಗುವುದಿಲ್ಲ. ನಾನು ಬಿಜೆಪಿಗೆ ಮೋಸ ಮಾಡುವುದಿಲ್ಲ ಬಿಜೆಪಿ ನನಗೆ ತಾಯಿ ಇದ್ದಂತೆ. ತಾಯಿಗೆ ಮೋಸ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೇ ಸಾಯುತ್ತೇನೆ ಎಂದು ಹೇಳಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸೋಲನುಭವಿಸಿ ಬಳಿಕ ಬಾಬೂರಾವ್ ಚಿಂಚನಸೂರ್ ಬಿಜೆಪಿ ಸೇರಿದ್ದರು. ಬಿಜೆಪಿಯಿಂದ ಎಂಎಲ್ ಸಿ ಆಗಿದ್ದಾರೆ. ಆದರೆ ಪಕ್ಷದಲ್ಲಿ ತನ್ನನ್ನ ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಬಾಬೂರಾವ್ ಚಿಂಚನಸೂರ್ ಮತ್ತೆ ಕಾಂಗ್ರೆಸ್ ಗೆ ಮರಳಲು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿತ್ತು. : - - – –- .