ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್. ಬೆಂಗಳೂರು,ಫೆಬ್ರವರಿ,13,2023(..):ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಂದ 1.35 ಕೋಟಿ ರೂ. ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಕುಮಾರಸ್ವಾಮಿ 8 ಚೆಕ್‌ ನೀಡಿದ್ದರು. ಆದರೆ ಈ ಎಲ್ಲಾ ಚೆಕ್‌ ಬೌನ್ಸ್‌ ಆಗಿತ್ತು. ಈ ಕುರಿತು ಹೂವಪ್ಪಗೌಡ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾ.ನ್ಯಾ.ಜೆ.ಪ್ರೀತ್ ಅವರು ಜೈಲು ಶಿಕ್ಷೆ ವಿಧಿಸಿದ್ದಾರೆ. ಸಾಲ‌ ಮರುಪಾವತಿ ಮಾಡಬೇಕು. ಇಲ್ಲದಿದ್ದರೇ 8 ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ. : –- - – .