ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಭೇಟಿ: ನಾಳೆ ಏರೋ ಇಂಡಿಯಾ 2023ಕ್ಕೆ ಚಾಲನೆ ಬೆಂಗಳೂರು, ಫೆಬ್ರವರಿ 12, 2023 (..): ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ 2023 ಸೋಮವಾರ ಆರಂಭವಾಗಲಿದ್ದು, ಉದ್ಘಾಟಿಸಲಿದ್ದಾರೆ. ನರೇಂದ್ರ ಮೋದಿ ಭಾನುವಾರ ರಾಜಸ್ಥಾನ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ರಾತ್ರಿ 7.40ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ ಬೆಳಗ್ಗೆ 9.30ಕ್ಕೆ ಏರೋ ಇಂಡಿಯಾ 2023 ಉದ್ಘಾಟಿಸಲಿದ್ದಾರೆ. ಏರೋ ಇಂಡಿಯಾ 2023ರ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ.