ಅರಣ್ಯಾಧಿಕಾರಿ ಕಚೇರಿ ಮನೆ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ. ಕೋಲಾರ,ಫೆಬ್ರವರಿ,10,2023(..):ಬೆಳ್ಳಂಬೆಳಿಗ್ಗೆ ಕೋಲಾರದಲ್ಲಿ ಅರಣ್ಯಾಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರದಲ್ಲಿ ಡಿಸಿಎಫ್ ವೆಂಕಟೇಶ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ 8 ಕಡೆ ಲೋಕಾಯುಕ್ತ ದಾಳಿಯಾಗಿದೆ. ಬೆಳ್ಳಂಬೆಳಿಗ್ಗೆ 5 ಗಂಟೆಗೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿಯಾಗಿದೆ. 8 ತಂಡಗಳಾಗಿ ದಾಳಿ ನಡೆಸಿದ್ದಾರೆ. : -- - – .