ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಧರಣಿ ಸತ್ಯಾಗ್ರಹ. ಬೆಂಗಳೂರು,ಫೆಬ್ರವರಿ,8,2023(..):ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬುರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕಳೆದ 6 ವರ್ಷಗಳಿಂದ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ಧೋರಣೆ ಖಂಡಿಸಿ ಇಂದು ಸಾರಿಗೆ ನೌಕರರು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. : - –- - - -.