ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯ: ಬಜೆಟ್ ಗೆ ಅನುಮೋದನೆ. ನವದೆಹಲಿ,ಫೆಬ್ರವರಿ,1,2023(..):ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು 5ನೇ ಬಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲು ಸಿದ್ಧರಾಗಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು ಕೇಂದ್ರ ಬಜೆಟ್ ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಪಡೆದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. : - –- -.