ಮೀಸಲಾತಿ ವಿಚಾರದಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಮತ್ತೆ ಅಸಮಾಧಾನ: ಬಿಜೆಪಿ ವಿರುದ್ಧ ಪ್ರಚಾರ ಮಾಡುವುದಾಗಿ ಎಚ್ಚರಿಕೆ. ಬೆಂಗಳೂರು,ಜನವರಿ,26,2023(..):ಪಂಚಲಸಾಲಿಗೆ 2ಎ ಮೀಸಲಾತಿ ಬೇಕೇ ಬೇಕು ಎಂದು ಪಟ್ಟು ಹಿಡಿದಿರುವ ಜಯಮೃತ್ಯುಂಜಯ ಸ್ವಾಮೀಜಿ ಇದೀಗ ಮತ್ತೆ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಜಯಮೃತ್ಯುಂಜಯ ಸ್ವಾಮೀಜಿ, ಬಿಜೆಪಿ ಮೀಸಲಾತಿ ವಿರೋಧಿ ಎಂದು ಬಿಜೆಪಿ ವಿರುದ್ದ ಪ್ರಚಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಿಎಂ ಮೂಗಿಗೆ ತುಪ್ಪ ಸವರಿದ್ದಾರೆ. 224 ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತೇವೆ ಮೀಸಲಾತಿ ಪರ ಯಾರಿದ್ದಾರೆ ಯಾರಿಲ್ಲ ಎಂದು ತಿಳಿಸುತ್ತೇವೆ. ಮೀಸಲಾತಿ ವಿಚಾರದಲ್ಲಿ ಪಿಎಂಗೆ ಪತ್ರ ಬರೆಯುವೆ ಎಂದು ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಇನ್ನು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೇ ಹಿಂದುಳಿದ ವರ್ಗಕ್ಕೆ ಅನ್ಯಾಯವಾದಂತಾಗುತ್ತದೆ . ಹೀಗಾಗಿ ಮೀಸಲಾತಿ ನೀಡುವುದು ಬೇಡ ಎಂದು ಹಲವೆಡೆ ವಿರೋಧವೂ ವ್ಯಕ್ತವಾಗಿದೆ. : - - - – .