ಮಹದೇಶ್ವರ ಬೆಟ್ಟದ ಬಳಿ ಗುಜರಾತ್ ಮೂಲದ ಬಸ್ ಅಪಘಾತ. ಹನೂರು,ಜನವರಿ,25,2023(..):ಗುಜರಾತ್ ಮೂಲದ ಬಸ್ ಮಹದೇಶ್ವರ ಬೆಟ್ಟ ಪಾಲರ್ ಬಳಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ಪಾಲರ್ ಘಾಟ್ ನಲ್ಲಿ ಈ ಘಟನೆ ನಡೆದಿದೆ. ಬಸ್ ನಲ್ಲಿದ್ದ ಸುಮಾರು 50 ಮಂದಿಯ ಪೈಕಿ 15-20 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಮಧ್ಯ ಪ್ರದೇಶದ ಮೂಲದವರಾಗಿದ್ದು, ಪ್ರವಾಸಕ್ಕೆಂದು ಬಂದಿದ್ದರು. ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೋಲಿಸರು ಭೇಟಿ, ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. : – – - - .