ಕೆಲಸಕ್ಕೆ ಹೋಗುವ ವೇಳೆ ದುರಂತ: ಖಾಸಗಿ ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು. ಬೆಂಗಳೂರು,ಜನವರಿ,24,2023(..):ಕೆಲಸಕ್ಕೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್​ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶವಂತಪುರದ ಸತ್ವ ಅಪಾರ್ಟ್​​ಮೆಂಟ್​ ಬಳಿ ಈ ಘಟನೆ ನಡೆದಿದೆ. ವಿನುತಾ ಮೃತಪಟ್ಟ ಮಹಿಳೆ. ವಿನುತ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಈ ನಡುವೆ ಇಂದು ಕೆಲಸಕ್ಕೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ವೇಳೆ ಫೋನ್ ಬಂತು ಎಂದು ಗಾಡಿ ಸೈಡಿಗೆ ಹಾಕಿ ವಿನುತಾ ಮಾತನಾಡುತ್ತಿದ್ದರು. ಈ ವೇಳೆ ಹಿಂದೆಯೇ ಬಸ್ ನಿಲ್ದಾಣದಲ್ಲಿ ಜನರನ್ನು ಹತ್ತಿಸಿ ಕೊಳ್ಳುತ್ತಿದ್ದ ಬಸ್ ಚಾಲಕ ಏಕಾಏಕಿ ಬಸ್ ಚಾಲನೆ ಮಾಡಿದ್ದಾನೆ. ಈ ಸಮಯದಲ್ಲಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು ಮಹಿಳೆ ವಿನುತಾ ತಲೆ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಯಶವಂತರಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - – – – .