ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಯಾವತ್ತೂ ಅಧಿಕಾರಕ್ಕೆ ಬರಲ್ಲ- ಬಿವೈ ವಿಜಯೇಂದ್ರ. ತುಮಕೂರು,ಜನವರಿ,21,2023(..):ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಯಾವತ್ತು ಅಧಿಕಾರಕ್ಕೆ ಬರಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದರು. ತುಮಕೂರಿನ ಬೆಳ್ಳಾವಿಯಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ಕಾಂಗ್ರೆಸ್ ನವರು ಅಧಿಕಾರಕ್ಕೆ ಬರ್ತೀವಿ ಅಂತ ಹಗಲು ಗನಸು ಕಾಣುತ್ತಿದ್ದಾರೆ. ಹೇಗಾದರೂ ಸರಿ ಅಧಿಕಾರಕ್ಕೆ ಬರಬೇಕು ಅಂತಾ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಲೂಟಿ ಹೊಡೆಯಲು ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದೇ ವೇಳೆ ಜೆಡಿಎಸ್ ವಿರುದ‍್ಧವೂ ಲೇವಡಿ ಮಾಡಿದ ಬಿವೈ ವಿಜಯೇಂದ್ರ, ಜೆಡಿಎಸ್ ಬಹುಮತದ ಬಗ್ಗೆ ಯೋಚಿಸಲ್ಲ. ಕೇವಲ 30 ರಿಂದ 40 ಸ್ಥಾನ ಗೆಲ್ಲುವ ಬಗ್ಗೆ ಯೋಚಿಸುತ್ತದೆ ಅಷ್ಟೆ ಎಂದು ಟೀಕಿಸಿದರು. : – - – – .