ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ: ಗದ್ದುಗೆ ದರ್ಶನ ಪಡೆದ ಸಿಎಂ ಬೊಮ್ಮಾಯಿ. ತುಮಕೂರು,ಜನವರಿ,21,2023(..):ಇಂದು ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿಗಳ 4ನೇ ವರ್ಷದ ಪುಣ್ಯಸ್ಮರಣೆಯಾಗಿದ್ದು ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶ್ರೀಗಳ ಗದ್ದುಗೆ ದರ್ಶನ ಪಡೆದರು. ತುಮಕೂರಿನ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಿವಕುಮಾರಸ್ವಾಮೀಜಿಗಳ ಗದ್ಧುಗೆ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ದಾಸೋಹ ದಿನ ಆಚರಣೆ ಮಾಡಲಾಗುತ್ತದೆ. ಸರ್ಕಾರದಿಂದ ಅಧಿಕೃತಯವಾಗಿ ಫೆಬ್ರವರಿಯಲ್ಲಿ ದಾಸೋಹ ದಿನ ಆಚರಣೆ ಮಾಡಲಾಗುತ್ತದೆ ಎಂದರು. ಇನ್ನು ಈಗಾಗಲೇ ಸಿಎಂ ನೇತೃತ್ವದಲ್ಲಿ ಚುನಾವಣೆ ಅಂತಾ ಅಮಿತ್ ಶಾ ಹೇಳಿದ್ದಾರೆ. ನಾವೆಲ್ಲರೂ ಒಟ್ಟಿಗೆ ಸೇರಿ ಚುನವಣೆಗೆ ಹೋಗುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : - - - -