ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು, ಆಗಸ್ಟ್,10,2024 (..):ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ಎರಡು ದಿನಗಳಲ್ಲಿ ಜುಲೈ ತಿಂಗಳ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎರಡು ದಿನಗಳಲ್ಲಿ ಜುಲೈ ತಿಂಗಳ ಹಣ ಜಮಾ ಆಗಲಿದೆ. ಆಗಸ್ಟ್ ತಿಂಗಳಿನ ಹಣ ಹಾಕುವ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಪ್ರತಿನಿತ್ಯ ಸಮಸ್ಯೆ ಹೇಳಿಕೊಂಡು ದಿನಕ್ಕೆ 500 ಕರೆ ಬರುತ್ತಿದೆ. ಎಲ್ಲಾ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲಾಗುತ್ತಿದೆ ಎಂದು ತಿಳಿಸಿದರು. ಇನ್ನು ಅಂಗನವಾಡಿಯಲ್ಲಿ ಮೊಟ್ಟೆ ವಂಚನೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಇದು ಕ್ಷಮಿಸಲಾರದ ಅಪರಾಧ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯನ್ನ ಅಮಾನತು ಮಾಡಲಾಗಿದೆ. ಬರೀ ಅಮಾನತು ಮಾಡಿದರೆ ಸಾಲದು ಬೇರೆ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದರು. : , , ,