ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ: ಇಬ್ಬರು ಸಾವು ತುಮಕೂರು,ಆಗಸ್ಟ್,12,2024 (..):ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ಈ ಘಟನೆ ನಡೆದಿದ್ದು. ಹೊಳೆನರಸಿಪುರ ತಾಲೂಕಿನ ಕಳ್ಳಿ ಗ್ರಾಮದ ನವೀನ್ (28) ಹಾಗೂ ತಿಪಟೂರು ತಾಲೂಕಿನ ಗಂಗನಘಟ್ಟದ ಶೇಷಾದ್ರಿ (47) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಚಿನ್ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : , ,